Tuesday, August 4, 2026

BDA Apartments

Home Crime ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಲಾರಿ: ಮೂವರು ದುರ್ಮರಣ

ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಲಾರಿ: ಮೂವರು ದುರ್ಮರಣ

ವಿಜಯಪುರ, ಸೆಪ್ಟೆಂಬರ್​, 6,2024 (www.justkannada.in):  ರಸ್ತೆ ಬದಿ ನಿಂತಿದ್ದವರ ಮೇಲೆ ಲಾರಿ ಹರಿದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಘಟನೆ ನಡೆದಿದೆ. ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ನಿವಾಸಿ ಬೈಕ್ ಸವಾರ ನಿಂಗರಾಜ ಚೌಧರಿ (22), ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನೀಲ ಖೈನೂರ (23) ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ‌ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.  ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  lorry, collision, three died, vijaypur