Monday, August 3, 2026

BDA Apartments

Home Front Page ವಾಲ್ಮೀಕಿ ನಿಗಮ ಅಕ್ರಮ ಕೇಸ್: ಬಿ ನಾಗೇಂದ್ರ ಸೇರಿ ಐವರು ಆರೋಪಿಗಳ ವಿರುದ್ದ ಚಾರ್ಜ್ ಶೀಟ್...

ವಾಲ್ಮೀಕಿ ನಿಗಮ ಅಕ್ರಮ ಕೇಸ್: ಬಿ ನಾಗೇಂದ್ರ ಸೇರಿ ಐವರು ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು,ಸೆಪ್ಟಂಬರ್,10,2024 (www.justkannada.in) ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ, ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರು ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಮಾಸ್ಟರ್ ಮೈಂಡ್ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಣತಿಯಂತೆ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ತನಿಖೆ ವೇಳೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ತಿಳಿದು ಬಂದಿದ್ದು ಇದೀಗ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Key words: Valmiki Corporation, illegal case, ED, Charge sheet, B. Nagendra