Wednesday, August 12, 2026

BDA Apartments

Home Cinema ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಜೈಲೇಗತಿ: ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಜೈಲೇಗತಿ: ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು,ಸೆಪ್ಟಂಬರ್,13,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ನ್ಯಾಯಾಲಯ ಮತ್ತೆ ನಾಲ್ಕು ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ  ಎಲ್ಲಾ ಆರೋಪಿಗಳಿಗೆ  ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳನ್ನ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು.

ಇದೀಗ ಎಲ್ಲಾ ಆರೋಪಿಗಳಿಗೆ ಸೆಪ್ಟಂಬರ್ 17ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ್ಯಾಯಾಧೀಶರು ಆದೇಶಿಸಿದ್ದಾರೆ.

Key words: Renukaswamy murder case, actor Darshan, Judicial custody