Sunday, September 13, 2026

BDA Apartments

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ :ರಾಜ್ಯ ಸರ್ಕಾರ ಆದೇಶ BDA JK_Adv BDA Adv
Home Front Page ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ :ರಾಜ್ಯ ಸರ್ಕಾರ ಆದೇಶ

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಸೆಪ್ಟಂಬರ್, 13,2024 (www.justkannada.in):  ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿರುವ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ರಾಜ್ಯ ಪೊಲೀಸ್‌‍ ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ.

ಹಾಗೆಯೇ ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್‌ ಚಂದ್ರ ಅವರನ್ನು ಪೊಲೀಸ್‌‍ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.  ಜೊತೆಗೆ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರ ಹುದ್ದೆಯನ್ನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಈ ಮಧ್ಯೆ  ಪೊಲೀಸ್‌‍ ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯಿಂದ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನ ಹಾಗೂ ಎಡಿಜಿಪಿ ಅಲೋಕ್‌ಕುಮಾರ್‌ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.

Key words: transfer, two IPS officers, Govt, orders