Sunday, August 9, 2026

BDA Apartments

Home Front Page ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ

ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ

ಬೆಂಗಳೂರು, ಸೆಪ್ಟಂಬರ್,18,2024 (www.justkannada.in):  ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನವೆಂಬರ್ 20 ರವರೆಗೆ ವಿಸ್ತರಣೆ ಮಾಡಲಾಗಿದೆ.

ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,  ಗಡುವು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿಕೆ ಮಾಡಿದೆ.

ನ್ಯಾಯಮೂರ್ತಿಗಳಾದ ಕೆ ಕಾಮೇಶ್ವರ ರಾವ್ ಮತ್ತು ಕೆ ರಾಜೇಶ್‌ ರೈ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ನವೆಂಬರ್ 20ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆ ಮಾಡಿದೆ. ಜತೆಗೆ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವನ್ನೂ ವಿಸ್ತರಣೆ ಮಾಡಿ  ಅದೇಶಿಸಿದೆ.

ಈ ಹಿಂದೆ ಸಾರಿಗೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ, ಸೆಪ್ಟೆಂಬರ್ 15ಕ್ಕೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು  ಕಡೇ ದಿನವಾಗಿತ್ತು.

Key words: HSRP, number plate, adoption, deadline, extended