Sunday, October 18, 2026

Dasara Wishes

Happy Dasara
Home Front Page ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್,25,2024 (www.justkannada.in): ಹೈಕೋರ್ಟ್ ತೀರ್ಪು ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೈಕೋರ್ಟ್ ತೀರ್ಪು ಸಮಾಧಾನ ತಂದಿಲ್ಲ. ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮುರುಗೇಶ್ ನಿರಾಣಿ ಮೇಲೂ ಬಲ ಪ್ರಯೋಗಿಸಬೇಕಿತ್ತು.  ಸಿಎಂ ಸಿದ್ದರಾಮಯ್ಯ ಅವರ 40 ವರ್ಷದ ರಾಜಕೀಯದಲ್ಲಿ ಯಾವುದೇ ಅಪಾದನೆ ಇರಲಿಲ್ಲ. ಇದು ರಾಜಕೀಯ ಪ್ರೇರಿತ ಅನ್ನೋದು ನೋವಾಗಿದೆ.  ನಾವು ಮುಂದೇ ಕಾನೂನು ಹೋರಾಟ  ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದರು.

 

Key words: CM Siddaramaiah, not resign, Minister, Dr. G. Parameshwar