Wednesday, October 7, 2026

BDA Apartments

immense respect BDA JK_Adv BDA Adv
Home Front Page ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು,ಸೆಪ್ಟಂಬರ್,25,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಿಎಂ ಕಾವೇರಿ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು  ವಶಕ್ಕೆ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ.

ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ ...

Key words:  Demand, resignation, CM, BJP , protest