Monday, September 28, 2026

BDA Apartments

ಸೆ.27 ರಂದು ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ BDA JK_Adv BDA Adv
Home Front Page ಸೆ.27 ರಂದು ಮೈಸೂರು ಅರಮನೆ  ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಸೆ.27 ರಂದು ಮೈಸೂರು ಅರಮನೆ  ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮೈಸೂರು,ಸೆಪ್ಟಂಬರ್,25,2024 (www.justkannada.in): ಪ್ರವಾಸೋದ್ಯಮ ಇಲಾಖೆಯ ವತಿಯಿಂದ TOURISM AND PEACE- ಪ್ರವಾಸೋದ್ಯಮ ಮತ್ತು ಶಾಂತಿ ”ಘೋಷವಾಕ್ಯದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೈಸೂರು ಅರಮನೆ ಆವರಣದಲ್ಲಿ ಸೆಪ್ಟಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು  ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಘನ ಉಪಸ್ಥಿತಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮದಲ್ಲಿ  ಸ್ಥಳೀಯ ಜನ ಪ್ರತಿನಿಧಿಗಳು,ಗಣ್ಯ ವ್ಯಕ್ತಿಗಳು, ಮೈಸೂರಿನ ಸಂಘ ಸಂಸ್ಥೆಗಳು, ಸರ್ವ ಧರ್ಮಗಳ ಪ್ರತಿನಿಧಿಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಕಲಾ ತಂಡಗಳು ಸೇರಿದಂತೆ ಸುಮಾರು 1000 ಜನ ಭಾಗವಹಿಸಲಿದ್ದಾರೆ.

ಕಾರ್ಯಕ್ರಮ ಉದ್ಘಾಟನೆಯ ನಂತರ ಅರಮನೆಯ ಆವರಣದಿಂದ ಕೋಟೆ ಆಂಜನೇಯ ಸ್ವಾಮಿ ಉತ್ತರ ದ್ವಾರ, ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ ಮೂಲಕ ಹೈವೇ ವೃತ್ತಕ್ಕೆ ಬಂದು ಮೆರವಣಿಗೆಯು ಅಂತ್ಯಗೊಳ್ಳುವಂತೆ ಹಮ್ಮಿಕೊಳ್ಳಲಾಗಿರುತ್ತದೆ.

ಸೆ.27 ರಂದು ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ VTU TOP BANNER 04

Key words: World Tourism Day,  celebration, Mysore Palace, 27th September