Thursday, October 15, 2026

Dasara Wishes

Strengthening DasraWishes_JK DasraWishes JK
Happy Dasara
Home Front Page ನಾನು ಯಾವುದೇ ತನಿಖೆ ಎದುರಿಸಲು ಸಿದ್ಧ- ಸಿಎಂ ಸಿದ್ದರಾಮಯ್ಯ

ನಾನು ಯಾವುದೇ ತನಿಖೆ ಎದುರಿಸಲು ಸಿದ್ಧ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 25,2024 (www.justkannada.in):  ನಾವು ಯಾವುದೇ ತನಿಖೆಗೆ ಹೆದರುವುದಿಲ್ಲ  ತನಿಖೆಯನ್ನು ಎದುರಿಸಲು ಸಿದ್ದನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ದ ಕೋರ್ಟ್ ತನಿಖೆಗೆ ಆದೇಶಿಸಿರುವ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಹೈಕೋರ್ಟ್  ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಜನ ಪ್ರತಿನಿಧಿಗಳ ನ್ಯಾಯಾಲಯ ಅನುಮತಿ ನೀಡಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು.

ನಾನು ಯಾವುದೇ ತನಿಖೆಗೆ ಹೆದರುವುದಿಲ್ಲ. ಯಾವುದೇ ತನಿಖೆಯನ್ನ ಎದುರಿಸಲು ನಾನು ಸಿದ್ದ. ನಿನ್ನೆಯೂ ಹೇಳಿದ್ದೇನೆ ಈಗಲೂ ಹೇಳುತ್ತೇನೆ  ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿನಲ್ಲಿ ತನಿಖೆಗೆ ಅನುಮತಿ ನೀಡಿರಬಹುದು ಎಂದು ಹೇಳಿದರು.

ನಾನು ಯಾವುದೇ ತನಿಖೆ ಎದುರಿಸಲು ಸಿದ್ಧ- ಸಿಎಂ ಸಿದ್ದರಾಮಯ್ಯ VTU TOP BANNER 04

Key words: I am, ready, face,any investigation, CM Siddaramaiah