Saturday, August 1, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ: ಬಿವೈ ವಿಜಯೇಂದ್ರ ಗೈರು

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ: ಬಿವೈ ವಿಜಯೇಂದ್ರ ಗೈರು

ಬೆಂಗಳೂರು,ಸೆಪ್ಟಂಬರ್,26,2024 (www.justkannada.in):  ಮುಡಾ ಹಗರಣದಲ್ಲಿ ಕೋರ್ಟ್ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು, ಮುಖಂಡರು ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ನಿನ್ನೆ ಜನಪ್ರಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿತ್ತು. ಈ ಬೆನ್ನಲೆ ಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಡ ಹೆಚ್ಚಾಗಿದ್ದು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಧರಣಿ ಕುಳಿತಿದ್ದಾರೆ.

ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್,  ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಶಾಸಕರು ಸಂಸದರು, ಎಂಎಲ್ ಸಿಗಳು ಪಾಲ್ಗೊಂಡಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅನಾರೋಗ್ಯದಿಂದಾಗಿ ಪ್ರತಿಭಟನೆಗೆ ಗೈರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: BJP, demanding, CM, resignation, protest