Tuesday, September 1, 2026

BDA Apartments

Home Front Page ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು,ಸೆಪ್ಟಂಬರ್,26,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಪುನರುಚ್ಚಾರ ಮಾಡಿದ್ದಾರೆ.

ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಕುರಿತು ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಏನೂ ತಪ್ಪು ಮಾಡಿಲ್ಲ. ನಾನು ರಾಜೀನಾಮೆ ಕೊಡಲ್ಲ.  ಬಿಜೆಪಿಯ ಅನೇಕ ನಾಯಕರ ವಿರುದ್ದ ಕೇಸ್ ದಾಖಲಾಗಿದೆ. ಅವರು ರಾಜೀನಾಮೆ ಕೊಟ್ಟಿದ್ದಾರಾ?  ಹಿಂದೆ ಗುಜರಾತ್ ನಲ್ಲಿ ಗೋದ್ರಾ ಗಲಭೆ ನಡೆದಿತ್ತು.  ಆಗ ಸಿಎಂ ಆಗಿದ್ದ ನರೇಂದ್ರ ಮೋದಿ ರಾಜೀನಾಮೆ ಕೊಟ್ರಾ? ಕೇಂದ್ರದಲ್ಲಿ ಹೆಚ್ ಡಿಕೆ ಮಂತ್ರಿ ಆಗಿದ್ದಾರೆ ರಾಜೀನಾಮೆ ನೀಡಿದ್ದಾರಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂಬ ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕೋಳಿವಾಡ  ಅವರ ಅಭಿಪ್ರಾಯ ಹೇಳಿದ್ದಾರೆ ಎಂದರು.

Key words: I will, not resign, CM Siddaramaiah, BJP