Tuesday, September 1, 2026

BDA Apartments

Home Front Page ನಾಳೆ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ: ನಿಷೇಧಾಜ್ಞೆ ಜಾರಿ

ನಾಳೆ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ: ನಿಷೇಧಾಜ್ಞೆ ಜಾರಿ

ಮೈಸೂರು,ಸೆಪ್ಟಂಬರ್,28,2024 (www.justkannada.in):  ನಾಳೆ ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

ಚಾಮುಂಡಿ ಬೆಟ್ಟ ಸೇರಿದಂತೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದಿನಾಂಕ 28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಸಭೆ ಸಮಾರಂಭ,  ರ್ಯಾಲಿ ಹಾಗೂ ಮೆರವಣಿಗೆಗೆ ನಿಷೇಧ ವಿಧಿಸಲಾಗಿದ್ದು ಟೌನ್ ಹಾಲ್ ಒಳ ಆವರಣ ಹೊರತುಪಡಿಸಿ ಉಳಿದೆಡೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

Key words: Mahisha Mandalotsava, Mysore,  tomorrow, Prohibition