Thursday, August 13, 2026

BDA Apartments

Home Front Page ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್

ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್

ನವದೆಹಲಿ,ಸೆಪ್ಟಂಬರ್,30,2024 (www.justkannada.in): ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲುಪಾಲಾಗಿದ್ದ ಮಾಜಿ ಸಚಿವ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸುಪ್ರೀಂಕೊರ್ಟ್ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಇದೀಗ ಈ ನಿರ್ಬಂಧವನ್ನ ತೆರವುಗೊಳಿಸಿದೆ.

ಹೌದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ನಿರ್ಬಂಧವನ್ನ ತೆರವುಗೊಳಿಸಿ ಆದೇಶ ಹೊರಡಿಸಿದೆ.

ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದ ಷರತ್ತನ್ನು ತೆರುವು ಮಾಡುವಂತೆ ಕೋರಿ   ಜನಾರ್ದನ ರೆಡ್ಡಿ  ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದ್ದು ಈ ಮೂಲಕ ಬಿಗ್ ರಿಲೀಫ್ ಸಿಕ್ಕಿದೆ.

Key words: MLA, Janardhana Reddy, enter, Bellary, Supreme Court