ಬೆಂಗಳೂರು,ಸೆಪ್ಟಂಬರ್,30,2024 (www.justkannada.in): ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿಕೆ ಮಾಡಿದೆ.
ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ. ಹಾಗೆಯೇ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಗಿದೆ.
ಪ್ರಕರಣ ಸಂಬಂಧ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಒಂದು ವೇಳೆ ಸೆಷನ್ಸ್ ಕೋರ್ಟ್ನಲ್ಲಿ ಬೇಲ್ ಸಿಗದಿದ್ದರೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
Key words: Adjournment, bail application, actors Darshan








