ಬೆಂಗಳೂರು,ಅಕ್ಟೋಬರ್,3,2024 (www.justkannada.in): ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಅಮೃತಹಳ್ಳಿ ಪೊಲೀಸ್ ಠಾಣೆ ಎಫ್ ಐಆರ್ ದಾಖಲಾಗಿದೆ.
50 ಕೋಟಿ ರೂಪಾಯಿ ಹಣ ನೀಡುವಂತೆ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ಉದ್ಯಮಿ ವಿಜಯ್ ತಾತಾ ಎಂಬವರು ದೂರು ನೀಡಿದ್ದರು.
ವಿಜಯ್ ತಾತಾ ನೀಡಿದ ದೂರಿನ ಮೇರೆಗೆ ಇದೀಗ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ BNS 3(5), 308(2), 351(2) ಅಡಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: FIR, against, Union Minister, HD Kumaraswamy








