Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಬೇಕೆಂಬುದು ನಮ್ಮ ಬಯಕೆ- ಮಾಜಿ ಸಂಸದ ಡಿಕೆ ಸುರೇಶ್

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಬೇಕೆಂಬುದು ನಮ್ಮ ಬಯಕೆ- ಮಾಜಿ ಸಂಸದ ಡಿಕೆ ಸುರೇಶ್

ಬೆಂಗಳೂರು, ಅಕ್ಟೋಬರ್‌, 4,2024 (www.justkannada.in):  ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರೇ ಐದು ವರ್ಷಗಳ ಕಾಲ ಸಿಎಂ ಆಗಿರಬೇಕೆಂಬುದು ನಮ್ಮ ಬಯಕೆಯಾಗಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್,  ತಾಯಿ ಚಾಮುಂಡಿ ಆಶೀರ್ವಾದದೊಂದಿಗೆ ಸಿದ್ದರಾಮಯ್ಯ ಅವರು ಎಲ್ಲಾ ಆರೋಪಗಳಿಂದ ಮುಕ್ತರಾಗುತ್ತಾರೆ. ಅವರನ್ನು ಯಾರೂ ಅಲ್ಲಾಡಿಸಲು ಆಗುವುದಿಲ್ಲ ಎಂದರು.

ಜಾತಿ ಗಣತಿ ವರದಿ ಜಾರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಜಾತಿ ಗಣತಿ ವರದಿ  ವಿಚಾರದಲ್ಲಿ ಎಚ್ಚರಿಕೆಹೆಜ್ಜೆ ಇಡಬೇಕು ಎಂದು ಸಿಎಂಗೆ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರ ಜನಗಣತಿ ಘೋಷಣೆ ಮಾಡಿದ್ದು, ಈ ಸಮಯದಲ್ಲೇ ಅಗತ್ಯ ಮಾನದಂಡ ಬಳಸಿ ಸಮೀಕ್ಷೆ ಮಾಡಿದರೆ ಯಾವುದೇ ಗೊಂದಲ ಇರುವುದಿಲ್ಲ. ಹೀಗಾಗಿ ಜನಗಣತಿವರೆಗೂ ಕಾಯುವುದು ಉತ್ತಮ ಎಂದು ಹೇಳುತ್ತೇನೆ” ಎಂದು ತಿಳಿಸಿದರು.

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಬೇಕೆಂಬುದು ನಮ್ಮ ಬಯಕೆ- ಮಾಜಿ ಸಂಸದ ಡಿಕ...

Key words: Siddaramaiah, CM , 5 years, Former MP, DK Suresh