Friday, August 14, 2026

BDA Apartments

Home Front Page ದಸರಾ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ- ಬಿ.ವೈ ವಿಜಯೇಂದ್ರ

ದಸರಾ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ- ಬಿ.ವೈ ವಿಜಯೇಂದ್ರ

ಬೆಂಗಳೂರು,ಅಕ್ಟೋಬರ್,7,2024 (www.justkannada.in):  ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ .ದಸರಾ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ನಾನೇ ಸಿಎಂ ಆಗಿಮುಂದುವರೆಯುತ್ತೇನೆ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ವಾತಾವರಣ ನಿರ್ಮಾಣವಾಗಿದೆ.  ದಸರಾ ಮುಗಿಯುತ್ತಿದ್ದಂತೆ ಸಿಎಂ ರಾಜೀನಾಮೆ ನೀಡಿದ್ದಾರೆ ಎಂದರು.

ಹೈಕಮಾಂಡ್ ಏನು ಚರ್ಚೆ ಮಾಡಿದೆ ಎಂದು ಸಿದ್ದರಾಮಯ್ಯಗೆ ಗೊತ್ತಿದೆ. ಸಚಿವರು ರಾಜ್ಯಪ್ರವಾಸ ಮಾಡುತ್ತಿಲ್ಲ. ಅಭಿವೃದ್ದಿಯನ್ನೂ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

Key words: Dasara, CM Siddaramaiah, resigns, BY Vijayendra