Wednesday, September 23, 2026

BDA Apartments

ಆರೋಗ್ಯ ಖಾತೆ ಅತ್ಯುತ್ತಮವಾಗಿ ನಿಭಾಯಿಸುವೆ-ಸಚಿವ ಸುಧಾಕರ್ ವಿಶ್ವಾಸ… BDA JK_Adv BDA...
Home Front Page ಬಿವೈ ವಿಜಯೇಂದ್ರ ಏನ್ ಕಾಂಗ್ರೆಸ್ ಹೈಕಮಾಂಡಾ? ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ

ಬಿವೈ ವಿಜಯೇಂದ್ರ ಏನ್ ಕಾಂಗ್ರೆಸ್ ಹೈಕಮಾಂಡಾ? ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ

ವಿಜಯಪುರ,ಅಕ್ಟೋಬರ್,7,2024 (www.justkannada.in): ದಸರಾ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಲು  ಬಿವೈ ವಿಜಯೇಂದ್ರ  ಯಾರು? ಏನ್ ಕಾಂಗ್ರೆಸ್ ಹೈಕಮಾಂಡಾ? ಎಂದು ಕಿಡಿಕಾರಿದರು.

ವಿಜಯೇಂದ್ರ ಹೇಳಿದ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾ?  ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಜಮೀರ್ ತಿಳಿಸಿದರು.

Key words: By Vijayendra, Congress, High Command, Minister, Jameer Ahmed Khan