Sunday, September 20, 2026

BDA Apartments

Home Front Page ಖ್ಯಾತ ಉದ್ಯಮಿ ರತನ್ ಟಾಟಾ ನಿಧನ: ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಖ್ಯಾತ ಉದ್ಯಮಿ ರತನ್ ಟಾಟಾ ನಿಧನ: ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮುಂಬೈ,ಅಕ್ಟೋಬರ್,10,2024 (www.justkannada.in): ಟಾಟಾ ಸನ್ಸ್  ಅಧ್ಯಕ್ಷ ಖ್ಯಾತ ಉದ್ಯಮಿ ರತನ್ ಟಾಟಾ(86) ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದು,  ಇಂದು ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ  ನಿನ್ನೆ ರತನ್ ಟಾಟಾ ಅವರು ನಿಧನರಾಗಿದ್ದಾರೆ. ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ಸಂಜೆ 4 ಗಂಟೆಗೆ ರತನ್ ಟಾಟಾ ಅವರ ಅಂತ್ಯಕ್ರಿಯೆ ನೆರವೇರಲಿದೆ.

ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.

ರತನ್ ಟಾಟಾ ಕೇವಲ ಕೈಗಾರಿಕೋದ್ಯಮಿಯಾಗಿರಲಿಲ್ಲ. ಅವರು ಟಾಟಾ ಗ್ರೂಪ್‌ಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟ ವ್ಯಕ್ತಿಯಾಗಿದ್ದು,  ವ್ಯಾಪಾರದೊಂದಿಗೆ ಸಾಮಾಜಿಕ ಜವಾಬ್ದಾರಿಗಳಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ ಭಾರತೀಯ ಉದ್ಯಮದ ಆಧಾರಸ್ತಂಭವಾಗಿದ್ದರು.

Key words: businessman,  Ratan Tata, passes away, Mumbai