Sunday, August 9, 2026

BDA Apartments

Home Front Page ನಾನು ಸಿಎಂ ಹುದ್ದೆ ಆಕಾಂಕ್ಷಿ ಅಲ್ಲ: ರಾಜ್ಯದಲ್ಲಿ ಸಿಎಂ ಬದಲಾವಣೆ ಪರಿಸ್ಥಿತಿ ಬಂದಿಲ್ಲ- ಸಚಿವ ಕೆ.ಎಚ್...

ನಾನು ಸಿಎಂ ಹುದ್ದೆ ಆಕಾಂಕ್ಷಿ ಅಲ್ಲ: ರಾಜ್ಯದಲ್ಲಿ ಸಿಎಂ ಬದಲಾವಣೆ ಪರಿಸ್ಥಿತಿ ಬಂದಿಲ್ಲ- ಸಚಿವ ಕೆ.ಎಚ್ ಮುನಿಯಪ್ಪ

ಕೋಲಾರ, ಅಕ್ಟೋಬರ್,10,2024 (www.justkannada.in): ನಾನು ಸಿಎಂ ಹುದ್ದೆಯ ಆಕಾಂಕ್ಷಿ ಅಲ್ಲ. ರಾಜ್ಯದಲ್ಲಿ ಸಿಎಂ ಬದಲಾವಣೆ ಪರಿಸ್ಥಿತಿ ಬಂದಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ರಾಜ್ಯದಲ್ಲಿ ಸಿಎಂ ಬದಲಾವಣೆ ಪರಿಸ್ಥಿತಿ ಬಂದರೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಈಗ ಇರುವ ಸಿಎಂಗೆ ಸಂಪೂರ್ಣ ಸಹಕಾರ ಕೊಡಬೇಕು. ಶಾಸಕರು, ಪಕ್ಷ ಎಲ್ಲರೂ ಸೇರಿ ಒಗ್ಗಟ್ಟಾಗಿ ನಿಂತು ಸಿಎಂ ಕೈ ಬಲಪಡಿಸೋಣ. ಬಿಜೆಪಿಯವರು ಮಾಡುವ ಹುನ್ನಾರಗಳಿಗೆ ಪಾಠ ಹೇಳುವುದಕ್ಕೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಜಾತಿಜನಗಣತಿ ವರದಿ ಜಾರಿ ಕುರಿತು ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಜಾತಿ ಜನಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕಿದೆ.  ಜಾತಿ ಗಣತಿ ಎಲ್ಲಾ ವರ್ಗದವರಿಗೂ ಅನುಕೂಲವಾಗುತ್ತದೆ. ಒಂದು ವೇಳೆ ಏನಾದರೂ ಲೋಪದೋಷಗಳು ಕಂಡುಬಂದರೆ ಅದನ್ನು ಸರಿಪಡಿಸಿ ಎಲ್ಲರ ಸಮ್ಮತಿ ಪಡೆದು ಜಾರಿ ಮಾಡಲಾಗುತ್ತದೆ ಎಂದರು.

Key words:  no change,  CM, state, Minister, KH Muniappa