Tuesday, August 11, 2026

BDA Apartments

Home Cinema ಅ.14ಕ್ಕೆ ನಟ ದರ್ಶನ್ ಜಾಮೀನು ಭವಿಷ್ಯ : ಆದೇಶ ಕಾಯ್ದಿರಿಸಿದ ಕೋರ್ಟ್

ಅ.14ಕ್ಕೆ ನಟ ದರ್ಶನ್ ಜಾಮೀನು ಭವಿಷ್ಯ : ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು,ಅಕ್ಟೋಬರ್,10,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 57ನೇ ಸಿಸಿ ಎಚ್ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ಅವರು,  ಸುದೀರ್ಘ ವಾದ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಸೋಮವಾರ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ನಟ ದರ್ಶನ್ ಪರ್ ಹಿರಿಯ ವಕೀಲ ಸಿವಿ ನಾಗೇಶ್ , ಪೊಲೀಸರ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ ಮಂಡಿಸಿದ್ದರು.

Key words: Actor, Darshan bail, October 14,  Court, reserved, order