Wednesday, October 7, 2026

BDA Apartments

immense respect BDA JK_Adv BDA Adv
Home Front Page ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ – ಸಿಎಂ ಸಿದ್ದರಾಮಯ್ಯ

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ – ಸಿಎಂ ಸಿದ್ದರಾಮಯ್ಯ

ಮೈಸೂರು, ಅಕ್ಟೋಬರ್ 12 ,2024 (www.justkannada.in):  ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ದಸರಾ ಜಂಬೂಸವಾರಿ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ.

ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ. ರಾಜ್ಯದ  ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ.  ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು  ಹೇಳಿದರು.

Key words: mysore Dasara, suttur math, CM Siddaramaiah