Tuesday, August 18, 2026

BDA Apartments

Home Cinema ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು, ಅಕ್ಟೋಬರ್,14,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತ ಎರಡನೇ ಆರೋಪಿ ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

ಪ್ರಕರಣ ಸಂಬಂಧ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದೆ.

ಪೊಲೀಸರ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ನಟ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ಸುದೀರ್ಘವಾಗಿ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಇದೀಗ ಇಂದು ನಟ ದರ್ಶನ್ ಜಾಮೀನು ಕುರಿತು ನ್ಯಾಯಾಲಯದ ನ್ಯಾಯಾಧೀಶರು ಆದೇಶ ಪ್ರಕಟಿಸಲಿದ್ದಾರೆ.

ಅಲ್ಲದೆ ಎ.1 ಆರೋಪಿ ಪವಿತ್ರಾ ಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಅರ್ಜಿಯನ್ನು ಕೂಡ ಇಂದು ನ್ಯಾಯಾಲಯ ವಿಚಾರಣೆ ನಡೆಸಲಿದೆ. ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆಯದೇ ಇದ್ದರೇ, ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ

Key words: Actor, Darshan, bail, decision, court, today