Monday, August 31, 2026

BDA Apartments

Home Front Page ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು

ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು, ಅಕ್ಟೋಬರ್,​ 14,2024 (www.justkannada.in):   ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ  ಆದೇಶ ಹೊರಡಿಸಿದೆ.

ಹಗರಣ ಸಂಬಂಧ ಮೂರು ತಿಂಗಳ ಹಿಂದೆ ಮಾಜಿ ಸಚಿವ ಬಿ.ನಾಗೇಂದ್ರ  ಅವರನ್ನ ಇಡಿ ಬಂಧಿಸಿತ್ತು. ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಪ್ರಕರಣದಲ್ಲಿ ಜಾಮೀನು ಕೋರಿ ಬಿ.ನಾಗೇಂದ್ರ  ಅರ್ಜಿ ಸಲ್ಲಿಸಿದ್ದರು. ಇದೀಗ ಜಾಮೀನು ಮಂಜೂರು ಮಾಡಿರುವ ಜನಪ್ರತಿನಿಧಿಗಳ ನ್ಯಾಯಾಲಯ  2 ಲಕ್ಷದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ  ನೀಡಿದೆ.

Key words: Conditional bail, granted, former minister, B. Nagendra