Sunday, August 23, 2026

BDA Apartments

Home Front Page ಮೈಸೂರಿನ‌ ಪ್ರತಿಷ್ಠಿತ ಕಾಲೇಜಿನಲ್ಲೇ ಅವ್ಯವಸ್ಥೆ ಆಗರ: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಮೈಸೂರಿನ‌ ಪ್ರತಿಷ್ಠಿತ ಕಾಲೇಜಿನಲ್ಲೇ ಅವ್ಯವಸ್ಥೆ ಆಗರ: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಮೈಸೂರು,ಅಕ್ಟೋಬರ್,15,2024 (www.justkannada.in): ಸೂಕ್ತ ಮೂಲಭೂತ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮೈಸೂರಿನ ಯುವರಾಜ ಕಾಲೇಜು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜಿನಲ್ಲಿ ಅವ್ಯವಸ್ಥೆ ಆಗರದಿಂದ ಬೇಸತ್ತ ವಿದ್ಯಾರ್ಥಿಗಳು  ತರಗತಿ ಬಹಿಷ್ಕರಿಸಿ ಧರಣಿ ನಡೆಸಿದರು.  ಸೂಕ್ತ ಶೌಚಾಲಯ, ಕುಡಿಯುವ ನೀರು, ಸ್ವಚ್ಚತೆ ಆದ್ಯತೆ ಕೊಡದ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮೂಲಕ ಕಿಡಿಕಾರಿದರು.

ಯುವರಾಜ ಕಾಲೇಜಿಗೆ ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಿಂದ ಬಂದು ವ್ಯಾಸಂಗಮಾಡುತ್ತಾರೆ.  ಆದರೆ. ಕಾಲೇಜಿನಲ್ಲಿ  ಗಬ್ಬೇದ್ದು ನಾರುವ ಶೌಚಾಲಯ, ಶುದ್ಧ ಕುಡಿಯುವ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ.‌ ಪ್ರತಿಷ್ಠಿತ ಕಾಲೇಜಿನಲ್ಲೇ ಸೂಕ್ತ ಮೂಲಭೂತ ವ್ಯವಸ್ಥೆ ವಿದ್ಯಾರ್ಥಿಗಳಿಗಿಲ್ಲ. ವಸತಿ ನಿಲಯದಲ್ಲೂ ಗುಣಮಟ್ಟದ ಊಟ ಕೊಡುತ್ತಿಲ್ಲ. ಇತ್ತ ಕಾಲೇಜಿನಲ್ಲೂ ಸೂಕ್ತ ವ್ಯವಸ್ಥೆಗಳಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.  ಕೂಡಲೇ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಆಗ್ರಹಿಸಿದರು.

Key words: Mysore, prestigious, college, protest , students