Friday, August 7, 2026

BDA Apartments

Home Crime ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು

ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು

ಹಾವೇರಿ,ಅಕ್ಟೋಬರ್,17,2024 (www.justkannada.in): ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಈ ಮಧ್ಯೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ 10 ವರ್ಷದ ಬಾಲಕ ನಿವೇದನ್ ಬೆಳಿಗ್ಗೆ 8.15ರ ವೇಳೆ ಕಾಲು  ಜಾರಿ ಬಿದ್ದು ಚರಂಡಿಯಲ್ಲಿ ಕೊಚ್ಚಿ ಹೋಗಿದ್ದನು. ನಂತರ ಅಗ್ನಿಶಾಮಕ ಸಿಬ್ಬಂದಿ ಕಾರ್ಯಚಾರಣೆ ನಡೆಸಿದ್ದು  11 ಗಂಟೆ ವೇಳೆಗೆ ಬಾಲಕ ಪತ್ತೆಯಾಗಿದ್ದ. ತಕ್ಷಣವೇ ಆತನನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಸಹ ಬಾಲಕ ನಿವೇದನ್ ಪ್ರಾಣ ಉಳಿಸಲು ಆಗಿಲ್ಲ. ಚಿಕಿತ್ಸೆ ಫಲಿಸದೆ ಬಾಲಕ ನಿವೇದನ್ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Key words:  boy, rain water,  died, treatment, Haveri