Friday, August 21, 2026

BDA Apartments

Home Crime ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು,ಅಕ್ಟೋಬರ್,21,2024 (www.justkannada.in):  ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ  ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

 ಮಹಿಳೆ ಮೇಳೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ  ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ  ನ್ಯಾ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ. ಹಾಗೆಯೇ ನಿರೀಕ್ಷಣಾ ಜಾಮೀನು ಅರ್ಜಿಯೂ ಕೂಡ ವಜಾ ಆಗಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಅತ್ಯಾಚಾರ ಪ್ರಕರಣ ಸೇರಿದಂತೆ ಪ್ರಜ್ವಲ್ ವಿರುದ್ದ ಒಟ್ಟು ಮೂರು ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Key words: Former MP,  Prajwal Revanna, bail application, dismissed