Friday, August 21, 2026

BDA Apartments

Home Front Page ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ವಿಚಾರ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ವಿಚಾರ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?

ಬೆಂಗಳೂರು,ಅಕ್ಟೋಬರ್,21,2024 (www.justkannada.in): ಚನ್ನಪಟ್ಟಣ ಉಪಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಯಾವತ್ತೂ ವೈಯಕ್ತಿಕವಾಗಿ ಹೇಳಿಲ್ಲ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ. ಸಾಧಕ ಬಾಧಕ ನೋಡಿಕೊಂಡು ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಲು ಹೆಚ್.ಡಿ ಕುಮಾರಸ್ವಾಮಿ ಅವರಿಗೆ ದೆಹಲಿ ಬಿಜೆಪಿ ನಾಯಕರು ಹೇಳಿದ್ದಾರೆ. ಮೈತ್ರಿಗೆ ಭಂಗವಾಗಬಾರದು ಅಂತಾ ಸುಮ್ಮನಿದ್ದೇವೆ ಎಂದು ತಿಳಿಸಿದರು.

ನಮಗೆ ಸ್ವಾತಂತ್ರವಾಗಿ ಇದ್ದಾಗಿಯೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಲು ಅಭ್ಯರ್ಥಿಯನ್ನ ಘೋಷಣೆ ಮಾಡಿಲ್ಲ. ಈ ಬಗ್ಗೆ ದೇವೇಗೌಡರು ಕುಮಾರಣ್ಣ ಚರ್ಚೆ ಮಾಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Key words: Channapatna, candidate, Nikhil Kumaraswamy, reaction