Thursday, October 29, 2026

Dasara Wishes

Happy Dasara
Home Front Page ‘ಕೈ’ ಹಿಡಿದ ಸೈನಿಕ: ಅಧಿಕೃತವಾಗಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

‘ಕೈ’ ಹಿಡಿದ ಸೈನಿಕ: ಅಧಿಕೃತವಾಗಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು,ಅಕ್ಟೋಬರ್,23,2024 (www.justkannada.in): ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಟಿಕೆಟ್ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆ ದೋಸ್ತಿ ನಾಯಕರಿಗೆ ಸೆಡ್ಡು ಹೊಡೆದಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿದರು. ಸಿಪಿ ಯೋಗೇಶ್ವರ್ ಗೆ ಪಕ್ಷದ ಬಾವುಟ್ ನೀಡ ಶಾಲು ಹೊದಿಸಿ ಡಿಕೆ ಶಿವಕುಮಾರ್ ಸ್ವಾಗತಿಸಿದರು.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್,  ಯೋಗೇಶ್ವರ್ ರಾಜಕಾರಣ ಆರಂಭವಾಗಿದ್ದೇ ಕಾಂಗ್ರೆಸ್ ನಿಂದ ಎಂದ್ರು. ಯಾವುದೇ ಷರತ್ತು ಹಾಕದೇ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ.  ಎಲ್ಲಾ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸಿದ್ದೇವೆ. ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಸಿಪಿವೈಗೆ ಸ್ವಾಗತ. ಪಕ್ಷದ ಸಿದ್ದಾಂತಗಳನ್ನ ಒಪ್ಪಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಯೋಗೇಶ್ವರ್ ಮರಳಿ ತಮ್ಮ ಗೂಡಿಗೆ ಬಂದಿದ್ದಾರೆ. ಹಿಂದೆ ಕೆಲವರು ಬಿಜೆಪಿಗೆ ಹೋಗಿದ್ದರು. ಈಗ ಮತ್ತೆ ಕಾಂಗ್ರೆಸ್ ಗೆ ಬರ್ತಿದ್ದಾರೆ ಎಂದರು.

Key words:  CP Yogeshwar, officially, joined, Congress