Friday, September 18, 2026

BDA Apartments

ವಯನಾಡು ಉಪಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ BDA JK_Adv BDA Adv
Home Front Page ವಯನಾಡು ಉಪಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ವಯನಾಡು ಉಪಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

 

ವಯನಾಡು,ಅಕ್ಟೋಬರ್,23,2024 (www.justkannada.in):  ವಯನಾಡು ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದರು.

ಬೃಹತ್ ರೋಡ್ ಶೋ ಮೂಲಕ ವಯನಾಡು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ  ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ  ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದರು. ಅಣ್ಣನ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ಪ್ರಿಯಾಂಕಾ ಗಾಂಧಿ ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಧುಮುಕಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಲೋಕಸಭೆ ವಿಪಕ್ಷ ನಾಯಕ ಹಾಗೂ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಬೃಹತ್  ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶಿಸಿದರು.

ನವೆಂಬರ್ 13 ರಂದು ವಯನಾಡು ಲೋಕಸಭೆ ಉಪಚುನಾವಣೆ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

Key words: Wayanad by-election, Priyanka Gandhi, nomination