Saturday, August 8, 2026

BDA Apartments

Home Front Page ಶಿಗ್ಗಾಂವಿ ಕ್ಷೇತ್ರದಲ್ಲಿ ಯಾವುದೇ ಬಂಡಾಯವಿಲ್ಲ- ಸಂಸದ ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ ಕ್ಷೇತ್ರದಲ್ಲಿ ಯಾವುದೇ ಬಂಡಾಯವಿಲ್ಲ- ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ,ಅಕ್ಟೋಬರ್,23,2024 (www.justkannada.in):  ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶಿಗ್ಗಾಂವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಬಿಜೆಪಿ  ಟಿಕೆಟ್ ನೀಡಲಾಗಿದೆ. ಈ ಮಧ್ಯೆ ಕ್ಷೇತ್ರದಲ್ಲಿ ಬಂಡಾಯ ಕುರಿತು ಮಾತನಾಡಿದ ಬಸವರಾಜ ಬೊಮ್ಮಾಯಿ, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ  ಮತ್ತು ಸೌಹಾರ್ದಯುತವಾಗಿ ಮಾಡುತ್ತೇವೆ ಎಂದರು.

ಬಿಜೆಪಿ ಅಭ್ಯರ್ಥಿಯಾಗಿ  ಭರತ್‌ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಬೊಮ್ಮಾಯಿ  ತಿಳಿಸಿದರು.

ಇನ್ನು ಮಾಜಿ ಸಚಿವ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ,  ಸಿ.ಪಿ ಯೋಗೇಶ್ವ‌ರ್ ರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನ ಮಾಡಿದವು. ಆದರೆ ಅವರು ಕಾಂಗ್ರೆಸ್ ಸೇರಿರುವುದು ದೊಡ್ಡ ದುರಂತ. ಕಾಂಗ್ರೆಸ್‌ ಗೆ ಯಾರೂ ಅಭ್ಯರ್ಥಿ ಇರಲಿಲ್ಲ. ಅಲ್ಲಿ ಸುಲಭವಾಗಿ ಎನ್‌ ಡಿಎ ಅಭ್ಯರ್ಥಿ ಗೆಲ್ಲಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Shiggamvi constituency,  MP, Basavaraja Bommai

…………………..