Saturday, September 5, 2026

BDA Apartments

Home Front Page ಮುಡಾ ಕೇಸ್ ತನಿಖೆಗೆ ಅನುಮತಿ: ಆದೇಶ ರದ್ದು ಪಡಿಸಲು ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ

ಮುಡಾ ಕೇಸ್ ತನಿಖೆಗೆ ಅನುಮತಿ: ಆದೇಶ ರದ್ದು ಪಡಿಸಲು ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ

ಬೆಂಗಳೂರು,ಅಕ್ಟೋಬರ್,24,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ  ಸಿಎಂ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಸೆಪ್ಟಂಬರ್ 24 ರಂದು ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಆದೇಶಿಸಿದ್ದರು.

ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿ ರಾಜ್ಯಪಾಲರ ಕ್ರಮ ಸರಿಯಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಇದೀಗ ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ.

Key words: Muda case, CM Siddaramaiah, High Court