Saturday, August 8, 2026

BDA Apartments

Home Front Page ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ: ನಯಾ ಪೈಸೆ ಅಭಿವೃದ್ಧಿಯಾಗಿಲ್ಲ- ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ: ನಯಾ ಪೈಸೆ ಅಭಿವೃದ್ಧಿಯಾಗಿಲ್ಲ- ಬಿವೈ ವಿಜಯೇಂದ್ರ

ಬಳ್ಳಾರಿ,ಅಕ್ಟೋಬರ್,25,2024 (www.justkannada.in): ರಾಜ್ಯದಲ್ಲಿ ಸರ್ಕಾರದ ವಿರುದ್ದ ಆಡಳಿತ ವಿರೋಧಿ ಅಲೆ ಸೃಷ್ಠಿಯಾಗಿದ್ದು ಮೂರು ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಸಂಡೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ದ ಆಡಳಿತ ವಿರೋಧಿ ಅಲೆ ಇದೆ. ಉಪಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಗೊತ್ತಾಗುತ್ತೆ. ಕಾಂಗ್ರೆಸ್ ಯೋಗ್ಯತೆಗೆ ಎಂಪಿ ಚುನಾವಣೆಯಲ್ಲಿ 9 ಸ್ಥಾನ ಗೆದ್ದಿದ್ದಾರೆ.  ಕಾಂಗ್ರೆಸ್ ರೈತ ವಿರೋಧಿ, ಬಡವರ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

ಕ್ಷೇತ್ರದ  ಅಭಿವೃದ್ಧಿಗೆ1 ರೂ ಹಣವಿಲ್ಲ ಎಂದು ದೇಶಪಾಂಡೆ ಹೇಳಿದರು. ಈಗಾಗಲೇ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಠಿಯಾಗಿದೆ ಕಾಂಗ್ರೆಸ್ ಹಗರಣದಲ್ಲಿ ಮುಳುಗಿದೆ. ಅಹಿಂದ ಹೆಸರು ಹೇಳಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರು ಆದರೆ ರಾಜ್ಯದಲ್ಲಿ ನಯಾಪೈಸೆ ಅಭಿವೃದ್ದಿಯಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

Key words: congress, government, not development, BY Vijayendra