Monday, September 21, 2026

BDA Apartments

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಸ್ತಿ ವಿವರ ಬಹಿರಂಗ BDA JK_Adv BDA Adv
Home Front Page ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಸ್ತಿ ವಿವರ ಬಹಿರಂಗ

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಸ್ತಿ ವಿವರ ಬಹಿರಂಗ

ರಾಮನಗರ, ಅಕ್ಟೋಬರ್, 25,2024 (www.justkannada.in): ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಅವರು ಆಸ್ತಿ ವಿವರ ಘೋಷಣೆ ಮಾಡಿಕೊಂಡಿದ್ದಾರೆ.

ಇಂದು ನಿಖಿಲ್ ಬೃಹತ್​ ರೋಡ್​ ಶೋ ಮೂಲಕ ತೆರಳಿ ಎನ್ ಡಿಎ ಅಭ್ಯರ್ಥಿಯಾಗಿ  ನಾಮಪತ್ರ ಸಲ್ಲಿಸಿದರು. ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರ ಬಹಿರಂಗಪಡಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ  113 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ, ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಇನ್ನು ಅವರ ಪುತ್ರ ವ್ಯಾನ್ ದೇವ್ ಹೆಸರಿನಲ್ಲಿ 11ಲಕ್ಷ ರೂ. ಹಣ ಇದೆ. ನಿಖಿಲ್‌ ಕುಮಾರಸ್ವಾಮಿ ಬಳಿ ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ.

ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ. ಇನ್ನು ನಿಖಿಲ್ ಹೆಸರಲ್ಲಿ ಒಟ್ಟು 70.44 ಕೋಟಿ ಸಾಲ ಇದೆ. ತಮ್ಮ ಪತ್ನಿ ಹೆಸರಲ್ಲಿ 4.96 ಕೋಟಿ ರೂ. ಸಾಲ ಇದೆ ಎಂದು  ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿವಿವರದಲ್ಲಿ ಬಹಿರಂಗಪಡಿಸಿದ್ದಾರೆ.

Key words: Alliance candidate, Nikhil Kumaraswamy’,  property, details