Friday, September 11, 2026

BDA Apartments

Home Crime ಮೂವರು ಬಿಜೆಪಿ ನಾಯಕರ ವಿರುದ್ದ ಕಾಂಗ್ರೆಸ್ ದೂರು

ಮೂವರು ಬಿಜೆಪಿ ನಾಯಕರ ವಿರುದ್ದ ಕಾಂಗ್ರೆಸ್ ದೂರು

ಮೈಸೂರು,ಅಕ್ಟೋಬರ್,26,2024 (www.justkannada.in): ಮುಸ್ಲಿಂ ಸಮುದಾಯವನ್ನ ಟಾರ್ಗೆಟ್ ಮಾಡಿ ಕೋಮು ದ್ವೇಷ ಹರಡಿಸುವ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೂವರು ಬಿಜೆಪಿ ನಾಯಕರ ವಿರುದ್ದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ದೂರು ಸಲ್ಲಿಸಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ವಿಧಾನಪರಿಷತ್ ಸದಸ್ಯ ಸಿಟಿ ರವಿ ಹಾಗೂ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷ ಮೋಸಿನ್ ಖಾನ್ ನೇತೃತ್ವದಲ್ಲಿ ಮೈಸೂರು ಜಿಲ್ಲೆ ಹೆಚ್ಚುವರಿ ಅಧೀಕ್ಷಕ  ಎಲ್ ನಾಗೇಶ್ ಅವರಿಗೆ ದೂರು ಸಲ್ಲಿಕೆ ಮಾಡಲಾಗಿದೆ.

ಇತ್ತೀಚಿಗೆ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಚಕ್ರವರ್ತಿ ಸೂಲಿಬೆಲೆ ಮುಸ್ಲಿಂ ಸಮುದಾಯವನ್ನ ಟಾರ್ಗೆಟ್ ಮಾಡಿದ್ದಾರೆ. ಕೋಮು ದ್ವೇಷ ಹರಡಿಸುವ ಹೇಳಿಕೆಗಳನ್ನ ನೀಡುತ್ತಿದ್ದಾರೆ.ಇದರಿಂದ ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳಾಗುತ್ತಿದೆ. ಸಮಾಜದ ಶಾಂತಿ ಕದಡುವ ಹೇಳಿಕೆ ನೀಡುತ್ತಿರುವ ಈ ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಮೋಸಿನ್ ಖಾನ್ ಒತ್ತಾಯಿಸಿದ್ದಾರೆ.

Key words: Congress, complaint, legal action, against, BJP leaders