Sunday, August 9, 2026

BDA Apartments

Home Front Page ಮುಡಾ ಹಗರಣ: ಮಾಜಿ ಮುಡಾ ಆಯುಕ್ತ ನಟೇಶ್ ಮನೆ ಮೇಲೆ ಇಡಿ ದಾಳಿ..?

ಮುಡಾ ಹಗರಣ: ಮಾಜಿ ಮುಡಾ ಆಯುಕ್ತ ನಟೇಶ್ ಮನೆ ಮೇಲೆ ಇಡಿ ದಾಳಿ..?

ಬೆಂಗಳೂರು,ಅಕ್ಟೋಬರ್,28,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ.  ಈ ನಡುವೆ ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ  ಎಂಬ ಮಾಹಿತಿ ಲಭ್ಯವಾಗಿದೆ.

ಮುಡಾ ಸೈಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ 10ನೇ ಕ್ರಾಸ್ ನಲ್ಲಿರುವ ಮಾಜಿ ಮುಡಾ ಆಯುಕ್ತ ನಟೇಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಇಡಿ ಅಧಿಕಾರಿಗಳು ಬೆಳಿಗ್ಗೆ ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​ ಎನ್​. ಮಂಜುನಾಥ್​ ಮನೆ ಮೇಲೆ ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದೆ ಎನ್ನಲಾಗಿದೆ. ಈ ಹಿಂದೆ ನಟೇಶ್ ಆಯುಕ್ತರಾಗಿದ್ದಾಗ  ಸಿಎಂ ಸಿದ್ದರಾಮಯ್ಯ ಪತ್ನಿಗೆ ಸೈಟ್ ಹಂಚಿಕೆ ಮಾಡಿದ್ದರು.

Key words: Muda case, ED, raid,  Natesh, house