Wednesday, October 7, 2026

BDA Apartments

immense respect BDA JK_Adv BDA Adv
Home Front Page ವಿಜಯೇಂದ್ರ ಅಧ್ಯಕ್ಷರಾಗಿರುವವರೆಗೂ ಪ್ರಚಾರ, ಕಾರ್ಯಕ್ರಮಗಳಿಗೆ ಹೋಗಲ್ಲ- ಶಾಸಕ ರಮೇಶ್ ಜಾರಕಿಹೊಳಿ

ವಿಜಯೇಂದ್ರ ಅಧ್ಯಕ್ಷರಾಗಿರುವವರೆಗೂ ಪ್ರಚಾರ, ಕಾರ್ಯಕ್ರಮಗಳಿಗೆ ಹೋಗಲ್ಲ- ಶಾಸಕ ರಮೇಶ್ ಜಾರಕಿಹೊಳಿ

ಬೆಳಗಾವಿ,ಅಕ್ಟೋಬರ್,28,2024 (www.justkannada.in): ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವವರೆಗೂ ನಾನು ಯಾವುದೇ ಪ್ರಚಾರ ಕಾರ್ಯಕ್ರಮಗಳಿಗೆ ಹೋಗಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಬಿವೈ ವಿಜಯೇಂದ್ರ ಪಕ್ಷದ ಅಧ್ಯಕ್ಷನಾಗಿರುವವರೆಗೂ ನಾನು ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗುವುದಿಲ್ಲ. ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದರು.

ಬಿಎಸ್ ಯಡಿಯೂರಪ್ಪ ಸಿಎಂ ಆಗಲು ಸಿಪಿ ಯೋಗೇಶ್ವರ್ ಕಾರಣ ಎಂಬ ಶಾಸಕ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ ಹಾಗೂ ನಾನು, ಎನ್ ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್‌ ನಲ್ಲಿ ಇದ್ದವು ಎಂದು ತಿಳಿಸಿದರು.

Key words: MLA, Ramesh Jarakiholi, BJP, BY Vijayendra