Friday, August 7, 2026

BDA Apartments

Home Cinema ನಟ ದಿ. ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

ನಟ ದಿ. ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

ಬೆಂಗಳೂರು,ಅಕ್ಟೋಬರ್,29,2024 (www.justkannada.in):  ನಟ  ದಿ. ಪುನೀತ್‌ ರಾಜ್‌ಕುಮಾರ್‌ ಅವರು ನಮ್ಮನ್ನ ಅಗಲಿ ಮೂರು ವರ್ಷಗಳು ಕಳೆದಿದ್ದು ಇಂದು ಅಪ್ಪು ಅವರ ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದರು.

ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್‌ ರಾಜ್ ಕುಮಾರ್ ಅವರ ಸಮಾಧಿಗೆ ಪುನೀತ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಮಗಳು ವಂದಿತಾ, ನಟ ರಾಘವೇಂದ್ರ ರಾಜ್‌ಕುಮಾರ್‌ ದಂಪತಿ ಸೇರಿದಂತೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು.ಪೂಜೆ ಸಲ್ಲಿಸಿದ ಬಳಿಕ ಪುನೀತ್‌ ಅವರ ನೆಚ್ಚಿನ ತಿಂಡಿ, ಸಿಹಿ ತಿನಿಸುಗಳನ್ನು ಎಡೆ ಇಟ್ಟರು.

ನಟ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದು ಪುಷ್ಪನಮನ ಸಲ್ಲಿಸಿದ್ದಾರೆ. 2021ರ ಅಕ್ಟೋಬರ್ 29ರಂದು ನಟ ಪುನೀತ್‌ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು.

Key words: actor, Puneeth Raj Kumar, Remembrance, Family ,Worship