Sunday, August 9, 2026

BDA Apartments

Home Front Page ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.

ಮೈಸೂರು,ಅಕ್ಟೋಬರ್,30,2024 (www.justkannada.in): ಪದವಿ ಪರೀಕ್ಷೆ ಮುಂದೂಡಿಕೆ, ಪರೀಕ್ಷಾ ಶುಲ್ಕ ಪಾವತಿ ದಿನಾಂಕ ವಿಸ್ತರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮೈಸೂರು ವಿಶ್ವ ವಿದ್ಯಾನಿಲಯದ ಆಡಳಿತ ಕಚೇರಿ ಕ್ರಾಫರ್ಡ್ ಹಾಲ್ ಮುಂಭಾಗ  ಮಹಾರಾಜ, ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು  ಪ್ರತಿಭಟನಾ ಧರಣಿ ನಡೆಸಿದರು.  ಸಿಲಬಸ್ ಕಂಪ್ಲೀಟ್ ಮಾಡದೆ  ಪರೀಕ್ಷೆ ಮಾಡಲು ಮುಂದಾದ ಪ್ರಾಧ್ಯಾಪಕರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಪರೀಕ್ಷಾಂಗ ಕುಲಸಚಿವ ನಾಗರಾಜು ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಮನವಿ ಪತ್ರ ಸ್ವೀಕಾರ ಮಾಡಿದರು. 15 ದಿನಗಳ ಕಾಲ ಪರೀಕ್ಷೆ ಮುಂದೂಡುವುದಾಗಿ ಭರವಸೆ ನೀಡಿದರು. ಆದರೆ  ಪರೀಕ್ಷೆಯನ್ನು ಒಂದು ತಿಂಗಳುಗಳ ಕಾಲ ಮುಂದೂಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

Key words: Students, protest, Mysore, various, demands