Sunday, August 9, 2026

BDA Apartments

Home Front Page ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು,ಅಕ್ಟೋಬರ್,30,2024 (www.justkannada.in): ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ಖಂಡಿಸಿ ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವಿಚಾರವನ್ನ ಬಿಜೆಪಿಯವರು  ವಿವಾದ ಮಾಡುತ್ತಿದ್ದಾರೆ. ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ನೀಡಿರುವ ನೋಟಿಸ್ ಗಳನ್ನು ವಾಪಸ್ಸು ಪಡೆಯಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: BJP, politics, Waqf property, CM Siddaramaiah