Tuesday, September 22, 2026

BDA Apartments

Home Cinema ಕೆಜಿಎಫ್ 2 ಹಾಗೂ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ ! ಚಿತ್ರೀಕರಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಕೆಜಿಎಫ್ 2 ಹಾಗೂ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ ! ಚಿತ್ರೀಕರಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು, ಸೆಪ್ಟೆಂಬರ್ 27, 2019 (www.justkannada.in): ಯಶ್ ಅಭಿನಯದ ಕೆಜಿಎಫ್-2 ಚಿತ್ರತಂಡಕ್ಕೆ ಸುದ್ದಿ ಸಿಕ್ಕಿದೆ.

ಕೆಜಿಎಫ್-2 ಚಿತ್ರದ ಚಿತ್ರೀಕರಣ ಕೋಲಾರದ ಸೈನೈಡ್ ಗುಡ್ಡದಲ್ಲಿ ನಡೆಯುತ್ತಿದ್ದು, ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿತ್ತು.

ನಂತರ ಕೆಜಿಎಫ್ ಚಿತ್ರತಂಡ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿದ ಕೋರ್ಟ್ ಕೆಳ ಹಂತದ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿ, ವಿಚಾರಣೆ ಮುಂದೂಡಿದೆ. ಇದರಿಂದ ಯಸ್ ಅಭಿಮಾನಿಗಳು ಹಾಗೂ ಚಿತ್ರ ತಂಡಕ್ಕೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.