Sunday, September 13, 2026

BDA Apartments

ಟಾಟಾ ಏಸ್ ಪಲ್ಟಿ: 25ಕ್ಕೂ ಹೆಚ್ಚು ಮಂದಿಗೆ ಗಾಯ BDA JK_Adv BDA Adv
Home Front Page ಟಾಟಾ ಏಸ್ ಪಲ್ಟಿ:  25ಕ್ಕೂ ಹೆಚ್ಚು ಮಂದಿಗೆ ಗಾಯ

ಟಾಟಾ ಏಸ್ ಪಲ್ಟಿ:  25ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ,ನವೆಂಬರ್,2,2024 (www.justkannada.in): ಟಾಟಾ ಏಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುಣಸೆಪಾಳ್ಯ ಗ್ರಾಮದಲ್ಲಿ ನಡೆದಿದೆ.

ದೀಪಾವಳಿ ಹಿನ್ನೆಲೆ ಪೂಜೆ ಮುಗಿಸಿ ಹಿಂತಿರುಗುವಾಗ ಟಾಟಾ ಏಸ್ ಗೂಡ್ಸ್ ವಾಹನ  ಪಲ್ಟಿಯಾಗಿದೆ. ಘಟನೆಯಲ್ಲಿ ಹನೂರಿನ ವಿ‌.ಎಸ್‌.ದೊಡ್ಡಿ ಗ್ರಾಮದ 25 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿಎ ಹುಣಸೆಪಾಳ್ಯ ಸಮೀಪ ತಟ್ಟೆಕೆರೆ ಮಹದೇಶ್ವರಸ್ವಾಮಿ ದೇಗುಲದಲ್ಲಿ ಪೂಜೆ ಮುಗಿಸಿ ಹಿಂತಿರುಗುವಾಗ ಈ ಅವಘಡ  ಸಂಭವಿಸಿದೆ.

ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Tata Ace, overturns, More than, 25 injured