Saturday, September 12, 2026

BDA Apartments

ಶಕ್ತಿ ಯೋಜನೆ ನಡೆಸೋದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ- ಸಚಿವ ರಾ...
Home Front Page ಶಕ್ತಿ ಯೋಜನೆ ನಡೆಸೋದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ- ಸಚಿವ ರಾಮಲಿಂಗರೆಡ್ಡಿ

ಶಕ್ತಿ ಯೋಜನೆ ನಡೆಸೋದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು, ನವೆಂಬರ್, 2,2024 (www.justkannada.in): ಶಕ್ತಿ ಯೋಜನೆ ನಡೆಸೋದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,  ಶಕ್ತಿ ಯೋಜನೆಯನ್ನು ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ನೇರ ನಗದು ವರ್ಗಾವಣೆ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಆ ರೀತಿ ಅಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಯಾವ ಮಹಿಳೆಯರು ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹೀಗಾಗಿ ಇದನ್ನು ನಡೆಸುವುದು ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೂ ಯೋಜನೆಯನ್ನು  ನಿಲ್ಲಿಸುವುದಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ  ತಿಳಿಸಿದ್ದಾರೆ.

Key words: little difficult, Transport Department, Shakti Yojana, Minister, Ramalingareddy