Tuesday, August 4, 2026

BDA Apartments

Home Front Page ವಕ್ಫ್ ವಿರುದ್ದ ಬೆಂಗಳೂರು ಸೇರಿ ವಿವಿಧೆಡೆ ಬಿಜೆಪಿ ಪ್ರತಿಭಟನೆ

ವಕ್ಫ್ ವಿರುದ್ದ ಬೆಂಗಳೂರು ಸೇರಿ ವಿವಿಧೆಡೆ ಬಿಜೆಪಿ ಪ್ರತಿಭಟನೆ

ಬೆಂಗಳೂರು,ನವೆಂಬರ್,4,2024 (www.justkannada.in): ವಕ್ಫ್  ಹೆಸರಿನಲ್ಲಿ ರೈತರ ಆಸ್ತಿ ಕಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ.

ಬೆಂಗಳೂರಿನ ಕೆ.ಆರ್ ಪುರಂ, ಕೆಂಗೇರಿ, ಯಲಹಂಕ, ಅನೇಕಲ್ ನಾಲ್ಕು ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೋಲಾರದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹಾಗೂ ಸಂಡೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಇನ್ನು ವಕ್ಫ್ ವಿರುದ್ದ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.

Key words: BJP, protests, against, Waqf, Bengaluru