Sunday, September 13, 2026

BDA Apartments

ವಸತಿ ಶಾಲೆಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ BDA JK_Adv BDA Adv
Home Front Page ವಸತಿ ಶಾಲೆಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ

ವಸತಿ ಶಾಲೆಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ

ತುಮಕೂರು,ನವೆಂಬರ್, 7,2024 (www.jutkannada.in): ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ತುಮಕೂರಿನಲ್ಲಿ ವಸತಿ ಶಾಲೆಗಳಿಗೆ ದಿಢೀರ್ ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.

ಏಕಲವ್ಯ ವಸತಿ ಶಾಲೆಯಲ್ಲಿ ಕಳೆದ ಎರಡು ಮೂರು ದಿನಗಳ ಹಿಂದೆ ವಿದ್ಯಾರ್ಥಿ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ಭೇಟಿ ನೀಡಬೇಕಿತ್ತು. ಏಕಲವ್ಯ ವಸತಿ ಶಾಲೆಗೆ ಭೇಟಿ ನೀಡದೆ ಏಕಾಏಕಿ ಹುಲಿಕುಂಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಸಚಿವ ಪರಮೇಶ್ವರ್  ಭೇಟಿ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆ ಹಾಗೂ ಹುಲಿಕುಂಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ್ದಾರೆ. ವಸತಿ ಶಾಲೆಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದ್ದು ಹಾಗೂ ಭೊಜನ ಗೃಹ ಹಾಗೂ ವಸತಿ ಶಾಲೆ ವೀಕ್ಷಣೆ ಮಾಡಿದ್ದಾರೆ,

ಸರಿಯಾಗಿ ಆಹಾರ ಸಾಮಗ್ರಿಗಳನ್ನು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಗೃಹ ಸಚಿವ ವಸತಿ ಶಾಲೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ನಂತರ ಹತ್ತನೆ ತರಗತಿಯ ವಿದ್ಯಾರ್ಥಿಗಳ ಜೊತೆ ದಿನ ನಿತ್ಯದ ಪಾಠ ಪ್ರವಚನಗಳು ಹೇಗೆ ನಡೆಯುದಿದೆ ಎಂದು ವಿಚಾರಿಸಿದರು. ಹಾಗೂ ಪಠ್ಯ ಪುಸ್ತಕ ಹಾಗೂ ನೋಟ್ಸ್ ನೋಡಿ ಪಾಠದ ಬಗ್ಗೆ ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರಶ್ನೆ ಕೇಳಿದರು.

ಎರಡು ದಿನದ ಹಿಂದೆ ವಸತಿ ಶಾಲೆಯಲ್ಲೇ ಮೃತಪಟ್ಟ ವಿದ್ಯಾರ್ಥಿ ಅಭಿಷೇಕ್ ಮನೆಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಭೇಟಿ ನೀಡಲಿದ್ದಾರೆ.

Key words: Home Minister, Dr. G. Parameshwar, visit, residential schools