Friday, August 21, 2026

BDA Apartments

Home Front Page ‘ಕೈ’ ಅಭ್ಯರ್ಥಿ ಪರ ಪ್ರಚಾರದಲ್ಲಿ ‘ಬಿಜೆಪಿ ಶಾಸಕ’ ಭಾಗಿ

‘ಕೈ’ ಅಭ್ಯರ್ಥಿ ಪರ ಪ್ರಚಾರದಲ್ಲಿ ‘ಬಿಜೆಪಿ ಶಾಸಕ’ ಭಾಗಿ

ರಾಮನಗರ,ನವೆಂಬರ್,8,2024 (www.justkannada.in):  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣದಲ್ಲಿ ಪ್ರಚಾರದ ಭರಾಟೆ ಜೋರಾಗಿದ್ದು ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಪ್ರಚಾರದಲ್ಲಿ ತೊಡಗಿದ್ದಾರೆ.

ನವೆಂಬರ್ 13 ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ನಡುವೆ ಜಿದ್ದಾಜಿದ್ದಿನ ಕಾಳಗ ಏರ್ಪಟ್ಟಿದೆ.

ಇಂದು ಸಿ.ಪಿ ಯೋಗೇಶ್ವರ್ ಅವರ ಹುಟ್ಟೂರು ಚಕ್ಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪಾಲ್ಗೊಂಡು ಪಾಲ್ಗೊಂಡಿದ್ದರು. ಹಾಗೆಯೇ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಸಹ ಸಮಾವೇಶದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಪ್ರಚಾರ ನಡೆಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಜೆಪಿಯಿಂದ ದೂರ ಉಳಿದಿರುವ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

Key words: BJP, MLA, campaign, congress candidate