Tuesday, August 4, 2026

BDA Apartments

Home Crime ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಸ್ ಪಲ್ಟಿ: 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಸ್ ಪಲ್ಟಿ: 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಾಮರಾಜನಗರ,ನವೆಂಬರ್,9,2024 (www.justkannada.in): ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಆರ್.ಎಸ್ ದೊಡ್ಡಿ ಗ್ರಾಮದ ಬಳಿ ನಡೆದಿದೆ.

ಒಡೆಯರಪಾಳ್ಯದಿಂದ  ಕೊಳ್ಳೇಗಾಲದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ತಮಿಳುನಾಡಿನ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹಗಳು ಜಖಂ ಆಗಿದ್ದು ಕಾರಿನ ಚಾಲಕ ಸೇರಿದಂತೆ ಸುಮಾರು 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಳಕ್ಕೆ ರಾಮಾಪುರ ಪೋಲಿಸರ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

Key words: Bus, car, accident, injured