Thursday, September 24, 2026

BDA Apartments

Congress MĻ̧A BDA JK_Adv BDA Adv
Home Front Page ಮಾಜಿ ಸಿಎಂ ಬಿಎಸ್‌ ವೈಗೆ  ಮತ್ತೊಂದು ಸಂಕಷ್ಟ: ಪ್ರಾಸಿಕ್ಯೂಷನ್‌ ಗೆ ಶಿಫಾರಸು ಮಾಡಿದ ನ್ಯಾ. ಕುನ್ಹಾ...

ಮಾಜಿ ಸಿಎಂ ಬಿಎಸ್‌ ವೈಗೆ  ಮತ್ತೊಂದು ಸಂಕಷ್ಟ: ಪ್ರಾಸಿಕ್ಯೂಷನ್‌ ಗೆ ಶಿಫಾರಸು ಮಾಡಿದ ನ್ಯಾ. ಕುನ್ಹಾ ಆಯೋಗ

ಬೆಂಗಳೂರು,ನವೆಂಬರ್,9,2024 (www.justkannada.in): ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್​ ಮೂಕಲ್​ ಡಿ.ಮೈಕಲ್​ ಕುನ್ಹಾ ಆಯೋಗ ಹೇಳಿದೆ. ಈ ಸಂಬಂಧ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿಎಸ್​ ಯಡಿಯೂರಪ್ಪ ಮತ್ತು ಅಂದಿನ ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಆಯೋಗ ಶಿಫಾರಸು ಮಾಡಿದೆ.

ಅಂದಿನ ಬಿಜೆಪಿ ಸರ್ಕಾರ ಚೀನಾ ಕಂಪನಿಯಿಂದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮವೆಸಗಲಾಗಿದೆ ಎಂದು ವರದಿ ತಿಳಿಸಿದೆ.

ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​​​ ಡಿ.ಕುನ್ಹಾ ನೇತೃತ್ವದಲ್ಲಿ ಆಗಸ್ಟ್ 25, 2023ರಲ್ಲಿ‌ ರಚನೆಯಾಗಿದ್ದ ತನಿಖಾ ಆಯೋಗ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದು ಪತ್ತೆ ಮಾಡಿದೆ.

ಇದೀಗ ಕೋವಿಡ್ ಅಕ್ರಮಗಳ ಬಗ್ಗೆ ಜಸ್ಟಿಸ್ ಮೈಕೆಲ್ ಡಿ ಕುನ್ಹಾ ಅವರು ದಾಖಲೆ ಸಮೇತ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮವೆಸಗಿದ ಅಂದಿನ ಸಿಎಂ ಯಡಿಯೂರಪ್ಪ ಮತ್ತು ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಶಿಫಾರಸು ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: covid scam, Former CM, BSY,  recommended, prosecution