Monday, November 2, 2026

Dasara Wishes

Happy Dasara
Home Crime ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ,ನವೆಂಬರ್,11,2024 (www.justkannada.in): ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.

ಈ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Key words: Supreme Court,  dismisses, Prajwal Revanna, bail petition