Saturday, September 19, 2026

BDA Apartments

ಒನಕೆ ಓಬವ್ವ ಜಯಂತಿಯಂದು ವೀರವನಿತೆ ಸ್ಮರಣೆ BDA JK_Adv BDA Adv
Home Front Page ಒನಕೆ ಓಬವ್ವ ಜಯಂತಿಯಂದು ವೀರವನಿತೆ ಸ್ಮರಣೆ .

ಒನಕೆ ಓಬವ್ವ ಜಯಂತಿಯಂದು ವೀರವನಿತೆ ಸ್ಮರಣೆ .

Mysore onake obavva Jayanthi celebration

ಒನಕೆ ಓಬವ್ವ ಜಯಂತಿಯಂದು ವೀರವನಿತೆ ಸ್ಮರಣೆ TOP-BANNER-01 TOP BANNER 01

ಮೈಸೂರು, ನ.11,2024: (www.justkannada.in news)  ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸ್ಮರಣೆ.

ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ. ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕು. ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿದಾಗ ಮನೆಯಲ್ಲಿದ್ದ  ಒನಕೆಯನ್ನೇ ಆಯುಧವನ್ನಾಗಿಸಿ ಎದುರಾಳಿ  ಸೈನಿಕರ ರುಂಡಗಳನ್ನು ಚಂಡಾಡಿ, ಕೋಟೆಯನ್ನು ರಕ್ಷಿಸಿ ಮಹಾಮಾತೆ ಓಬವ್ವ, ಇಂತಹವರ ಚರಿತ್ರೆಗಳು ನಾಡಿನಾಚೆಗೂ ಪಸರಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.

ಒನಕ ಓಬವ VTU TOP BANNER 04

ಮನೋರೋಗ ತಜ್ಞರಾದ ಡಾಕ್ಟರ್ ರೇಖಾ  ಮಾತನಾಡಿ, ವೀರ ವಿನಿತೆ ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ಐಕ್ಯತೆಗೆ ಪಣತೊಡಬೇಕು ಎಂದರು.

ನಗರ ಪಾಲಿಕೆ ಮಾಜಿ  ಸದಸ್ಯೆ ಪ್ರಮೀಳಾ ಭರತ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮುಡಾ ಮಾಜಿ ಸದಸ್ಯ ನವೀನ್ ಕುಮಾರ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ, ಸಹನಗೌಡ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್ ಹಾಜರಿದ್ದರು.

key words: Mysore, onake obavva ,Jayanthi, celebration